ಕನ್ನಡ ಪವಿತ್ರ ಬೈಬಲ್

Post Reply
User avatar
admin
Site Admin
Posts: 207922
Joined: Wed Apr 15, 2020 3:27 pm

ಕನ್ನಡ ಪವಿತ್ರ ಬೈಬಲ್

Post by admin »

Kannada Bible ( India- Karanataka ) » Matthew » Chapter 25
1
ಇದಲ್ಲದೆ ಪರಲೋಕ ರಾಜ್ಯವು ತಮ್ಮ ದೀಪಗಳನ್ನು ತಕ್ಕೊಂಡು ಮದಲಿಂಗ ನನ್ನು ಎದುರುಗೊಳ್ಳುವದಕ್ಕಾಗಿ ಹೊರಟುಹೋದ ಹತ್ತುಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವದು.
2
ಅವರಲ್ಲಿ ಐದುಮಂದಿ ಬುದ್ಧಿವಂತೆಯರೂ ಐದು ಮಂದಿ ಬುದ್ಧಿಹೀನರೂ ಇದ್ದರು.
3
ಬುದ್ಧಿಹೀನರು ತಮ್ಮ ದೀಪಗಳನ್ನು ತಕ್ಕೊಂಡು ತಮ್ಮೊಂದಿಗೆ ಎಣ್ಣೆಯನ್ನು ತಕ್ಕೊಳ್ಳಲಿಲ್ಲ,
4
ಬುದ್ದಿವಂತೆಯರು ತಮ್ಮ ದೀಪಗಳೊ ಂದಿಗೆ ಪಾತ್ರೆಯಲ್ಲಿ ಎಣ್ಣೆಯನ್ನೂ ತಕ್ಕೊಂಡರು.
5
ಮದಲಿಂಗನು ತಡಮಾಡಿದಾಗ ಅವರೆಲ್ಲರೂ ತೂಕಡಿಸಿ ನಿದ್ರಿಸಿದರು.
6
ಮಧ್ಯರಾತ್ರಿಯಲ್ಲಿ--ಇಗೋ, ಮದಲಿಂಗನು ಬರುತ್ತಾನೆ; ಅವನನ್ನು ಎದುರುಗೊಳ್ಳುವದಕ್ಕಾಗಿ ಹೊರಡಿರಿ ಎಂಬ ಕೂಗಾ ಯಿತು.
7
ಆಗ ಆ ಕನ್ಯೆಯರೆಲ್ಲರೂ ಎದ್ದು ತಮ್ಮ ದೀಪಗಳನ್ನು ಸರಿಪಡಿಸಿಕೊಂಡರು;
8
ಬುದ್ಧಿಹೀನರು ಬುದ್ಧಿವಂತೆಯರಿಗೆ-- ನಿಮ್ಮ ಎಣ್ಣೆಯಲ್ಲಿ ನಮಗೆ ಕೊಡಿರಿ; ಯಾಕಂದರೆ ನಮ್ಮ ದೀಪಗಳು ಆರಿಹೋಗಿವೆ ಅಂದರು.
9
ಆದರೆ ಬುದ್ಧಿವಂತೆಯರು ಪ್ರತ್ಯುತ್ತರ ವಾಗಿ--ಹಾಗಲ್ಲ, ಅದು ನಮಗೂ ನಿಮಗೂ ಸಾಲದೆ ಹೋದೀತು; ಆದದರಿಂದ ನೀವು ಮಾರು ವವರ ಬಳಿಗೆ ಹೋಗಿ ನಿಮಗೋಸ್ಕರ ಕೊಂಡು ಕೊಳ್ಳಿರಿ ಅಂದರು.
10
ಅವರು ಕೊಂಡುಕೊಳ್ಳುವದಕ್ಕೆ ಹೋದಾಗ ಮದಲಿಂಗನು ಬಂದನು. ಆಗ ಸಿದ್ಧವಾಗಿ ದ್ದವರು ಮದುವೆಗೆ ಆತನೊಂದಿಗೆ ಒಳಕ್ಕೆ ಹೊದರು; ತರುವಾಯ ಬಾಗಲು ಮುಚ್ಚಲಾಯಿತು.
11
ಇದಾದ ಮೇಲೆ ಆ ಬೇರೆ ಕನ್ಯೆಯರು ಸಹ ಬಂದು--ಕರ್ತನೇ, ಕರ್ತನೇ, ನಮಗೆ ಬಾಗಲನ್ನು ತೆರೆ ಅಂದರು.
12
ಆದರೆ ಅವನು ಪ್ರತ್ಯುತ್ತರವಾಗಿ--ನಿಮ್ಮನ್ನು ಅರಿ ಯೆನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
13
ಆದದರಿಂದ ಎಚ್ಚರವಾಗಿರ್ರಿ; ಯಾಕಂದರೆ ಮನುಷ್ಯಕುಮಾರನು ಬರುವ ದಿನ ವನ್ನಾಗಲೀ ಗಳಿಗೆಯನ್ನಾಗಲೀ ನೀವು ಅರಿಯದವರಾ ಗಿದ್ದೀರಿ ಅಂದನು.

User avatar
admin
Site Admin
Posts: 207922
Joined: Wed Apr 15, 2020 3:27 pm

Re: ಕನ್ನಡ ಪವಿತ್ರ ಬೈಬಲ್

Post by admin »

Thank you Lord!

Post Reply

Return to “Bible”